ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಬಿ.ಬಿ ಕಾವೇರಿ ಅವರನ್ನು ನೇಮಕ ಮಾಡಲಾಗಿದೆ.
ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಕೆ.ವಿ., ಐಎಎಸ್ (ಕೆ.ಎನ್: 2007) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಆಯುಕ್ತರಾಗಿ ನೇಮಿಸಲಾಗಿದೆ.
ಬೆಂಗಳೂರಿನ ಶಾಲಾ ಶಿಕ್ಷಣ ಆಯುಕ್ತರಾದ ಕಾವೇರಿ ಬಿ.ಬಿ., ಐಎಎಸ್ (ಕೆ.ಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.
ಕಾವೇರಿ ಬಿ.ಬಿ., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ.
ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್