ಬೆಂಗಳೂರು: 2025-26ನೇ ಸಾಲಿನ ಉನ್ನತ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಏಪ್ರಿಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಮೇ.28, 2025ಕ್ಕೆ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಲಾಗಿದೆ. ಆ ಬಗ್ಗೆ ಮುಂದೆ ಸಂಪೂರ್ಣ ಮಾಹಿತಿ ಓದಿ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ತಮ್ಮ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನೆ ಹಾಗೂ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ
ಸಂಯೋಜನೆ ಪ್ರಕ್ರಿಯೆ ಹಾಗೂ ಶೈಕ್ಷಣಿಕ ವೇಳಾಪಟ್ಟಿಯನ್ನು ಅಗತ್ಯ ಕಾಲಾವಕಾಶ ಮತ್ತು ಸ್ಪಷ್ಟವಾಗಿ ಪ್ರಕಟಿಸುವಂತೆ ಸರ್ಕಾರದಲ್ಲಿ ವಿವಿಧ ಮನವಿಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಸುಗಮವಾಗಿ ಜಾರಿಗೊಳಿಸಲು ಅನುವಾಗುವಂತೆ ಉನ್ನತ ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ವೇಳಾಪಟ್ಟಿಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದಿದೆ.
2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಂಯೋಜನಾ ವೇಳಾಪಟ್ಟಿಯು ಅಕ್ಟೋಬರ್, 2024 ರಂದು ಪ್ರಾರಂಭಗೊಂಡು ಮಾರ್ಚ್/ಏಪ್ರಿಲ್, 20250 ಮಾಹೆಯೊಳಗೆ ಅಂತ್ಯಗೊಳ್ಳಲಿರುವುದರಿಂದ ನಿಗಧಿತ ವೇಳಾಪಟ್ಟಿಯಂತೆ ತರಗತಿಗಳು ಪ್ರಾರಂಭಗೊಳ್ಳಲಿವೆ. ಮಾನ್ಯ ಉನ್ನತ ಶಿಕ್ಷಣ ಸಚಿವರು 2025-26 ಸಾಲಿನ ಶೈಕ್ಷಣಿಕ/ಸಂಯೋಜನಾ ವೇಳಾಪಟ್ಟಿಯನ್ನು ಪುನರಾವಲೋಕಿಸಿ ಅನುಮೋದನೆ ನೀಡಿರುತ್ತಾರೆ.
ಈ ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ:
1. ಅನುಬಂಧ-1:ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿನ ವೃತ್ತಿಪರವಲ್ಲದ ಸ್ನಾತಕ/ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ 2025-26ನೇ ಸಾಲಿನ ಸಂಯೋಜನೆ ಪ್ರಕ್ರಿಯೆ ವೇಳಾಪಟ್ಟಿ -ಸದರಿ ವೇಳಾಪಟ್ಟಿಯು ಕಾಲೇಜುಗಳ ವೃತ್ತಿಪರವಲ್ಲದ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ ಸಂಬಂಧಿತ ಹೊಸ ಕೋರ್ಸ್‌ಗಳ ಸಂಯೋಜನೆ, ಸಂಯೋಜನೆ ನವೀಕರಣ, ವಿದ್ಯಾರ್ಥಿ ಪ್ರಮಾಣ ಹೆಚ್ಚಳ/ಬದಲಾವಣೆ ಇತ್ಯಾದಿಯನ್ನು ಒಳಗೊಂಡಿರುತ್ತದೆ. ಈ ಪ್ರಕ್ರಿಯೆಯು UUCMS ಆನ್‌ಲೈನ್ ಪೋರ್ಟಲ್‌ನಲ್ಲಿ ಜರುಗಲಿದೆ.
2. ಅನುಬಂಧ-2: 2025-26ನೇ ಸಾಲಿಗೆ ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ನಿರಾಕ್ಷೇಪಣೆ ಪ್ರಮಾಣ ಪತ್ರವನ್ನು ನೀಡಿ ಸೀಟ್ ಮ್ಯಾಟ್ರಿಕ್‌ಸ್‌ನಲ್ಲಿ ಅಳವಡಿಸುವ ಪ್ರಕ್ರಿಯೆ. ಪುಸ್ತಾಪಿತ ಶೈಕ್ಷಣಿಕ ಚಟುವಟಿಕೆಗಳು ಎಐಸಿಟಿಇ ಹಾಗೂ ನೀಟ್ ಫಲಿತಾಂಶದ ಆಧಾರದ ಮೇಲೆ ಅಂತಿಮಗೊಳ್ಳಲಿದೆ.
3. ಅನುಬಂಧ-3: ಖಾಸಗಿ ವಿಶ್ವವಿದ್ಯಾಲಯಗಳಿಗೆ 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ ಹೊಸ ಕೋರ್ಸ್‌ಗಳ ಸಂಯೋಜನೆ/ವಿದ್ಯಾರ್ಥಿ ಪ್ರಮಾಣ ಹೆಚ್ಚಳ, ಕೋರ್ಸ್‌ಗಳ ಬದಲಾವಣೆ/ವೃತ್ತಿಪರ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪರಿಶೀಲನೆಯ ಹೊರಡಿಸಲಾಗುವುದು.
4. ಅನುಬಂಧ-4: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿನ ಸಂಯೋಜಿತ ಕಾಲೇಜಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಏಕರೂಪತೆ ಮತ್ತು ನಿಖರತೆಗಾಗಿ 2025-26ನೇ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಲಾಗುತ್ತಿದೆ.
ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳು ಅನುಬಂಧ-1 ರಿಂದ ಅನುಬಂಧ-4ರಲ್ಲಿನ ವೇಳಾಪಟ್ಟಿಗಳನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.
ಹೀಗಿದೆ 2025-26ನೇ ಸಾಲಿನ ಉನ್ನತ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut