ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳೋದಕ್ಕೆ ಅವಧಿಯನ್ನು ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ 25-10-2024 ರವರೆಗೆ ದಂಡ ರಹಿತವಾಗಿ ಹಾಗೂ ದಿನಾಂಕ 30-09-2024 ರಿಂದ ದಿನಾಂಕ 26-10-2024 ರಿಂದ 09-11-2024 ರವರೆಗೆ ದಂಡ ಸಹಿತವಾಗಿ ಶುಲ್ಕವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು ಕಲ್ಪಿಸಿದೆ ಎಂದಿದೆ.
ಈ ಸಂಬಂಧ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣ https://kseab.karnataka.gov.in ರಲ್ಲಿ ಅಪ್ಲೋಡ್ ಮಾಡಿದ್ದು, ಹೆಚ್ಚಿನ ವಿವರಗಳಿಗೆ ವೀಕ್ಷಿಸಬಹುದಾಗಿದೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
BREAKING: 2025-26ನೇ ಸಾಲಿನ ‘ಉನ್ನತ ಶಿಕ್ಷಣ ಇಲಾಖೆ’ಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್