ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿ ೪೦% ಕಮಿಷನ್ ಹೊಡೆದು, ರಾಜ್ಯದ ಮರ್ಯಾದೆ ತೆಗೆದವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಘನತೆಗೆ ದಕ್ಕೆ ತರುವ ರೀತಿಯಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ.ಕೇಂದ್ರದ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ.ಕರ್ನಾಟಕದ ಜನರ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಕೋವಿಡ್ ವೇಳೆ ಲೂಟಿ ಮಾಡಿದವರು ನಮಗೆ ನೀತಿ ಪಾಠ ಮಾಡುತ್ತಿದ್ದಾರೆ.40% ಕಮಿಷನ್ ಮೂಲಕ ರಾಜ್ಯದ ಮರ್ಯಾದೆ ಹರಾಜು ಹಾಕಿದ್ದಾರೆ. ಅಂಥವರು ನಮಗೆ ನೀತಿ ಪಾಠ ಹೇಳುತ್ತಿದ್ದಾರೆ. ಅಂತವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಆಕ್ರೋಶ ಅವರ ಹಾಕಿದರು.