ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್ ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವರುಣ ಆರ್ಭಟಿಸಿದ್ದಾನೆ. ಭಾರಿ ಮಳೆಯಿಂದಾಗಿ ರಸ್ತೆಯಲ್ಲ ಸಂಪೂರ್ಣವಾಗಿ ಜಲಾವೃತವಾಗಿದ್ದವು.
ಬೆಂಗಳೂರಿನ ಶಾಂತಿನಗರ, ಕೋರಮಂಗಲ, ರಿಚ್ಮಂಡ್ ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ.ಈ ವೇಳೆ ವಾಹನ ಸವಾರರು ಪರದಾಟ ನಡೆಸಿದರು.