ದಕ್ಷಿಣಕನ್ನಡ : ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಹೌದು ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಪ್ರಾಧ್ಯಪಕ ಹೇಳಿದ್ದೇನು?
ನವದಂಪತಿ ಸಮಾವೇಶದಲ್ಲಿ ಬಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.
ಇವರ ಈ ಒಂದು ಹೇಳಿಕೆಗೆ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧದ ಬೆನ್ನಲ್ಲೇ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.