ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಅಕ್ಟೋಬರ್ 3 ರಿಂದ 7 ರವರೆಗೆ ನಗರದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ನೆರೆಯ ಜಿಲ್ಲೆಗಳಾದ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾವೇರಿ ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು,
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ರಾಮನಗರ , ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.