ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಮ್ ನಾಪತ್ತೆಯಾಗಿದ್ದು, ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಕಾರು ಪತ್ತೆಯಾಗಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿದ್ದು, ಸ್ಥಳಕ್ಕೆ ಮೊಯಿದ್ದೀನ್ ಕುಟುಂಬಸ್ಥರು ಆಗಮಿಸಿದ್ದಾರೆ.
ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮುಮ್ತಾಜ್ ಅವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದಾರೆ. ನದಿಯಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳಿಂದ ಪರಿಶೀಲನೆ ನಡೆಸಲಾಗಿದೆ.