ಬೆಂಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಅವಧಿ ಮುಗಿಯೋದರ ಒಳಗಾಗಿ ಜಾತಿ ಗಣತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು ಇಂದು ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದರು.
ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದರೆ ಬೀಳಲಿ ಬಿಡಿ ಯಾಕೆ ಹೆದರುತ್ತೀರ? ಜಾತಿಗಣತಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಸರ್ಕಾರ ಯಾಕೆ ಯೋಚನೆ ಮಾಡುತ್ತೀದೆ ಅರ್ಥ ಆಗ್ತಿಲ್ಲ.ಮೀನಾ ಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿಗೆ ಮಾಡಲಿ ಜಾತಿಗಣತಿ ಜಾರಿಯಿಂದ ಎಲ್ಲಾ ಸಮುದಾಯಕ್ಕೆ ಅನುಕೂಲ ಆಗಲಿದೆ ಜಾತಿಗಣತಿ ಜಾರಿಯಿಂದಲೇ ಸರ್ಕಾರ ಹೋಗುತ್ತದೆ ಅಂದರೆ ಹೋಗಲಿ. ಎಂದು ಅವರು ತಿಳಿಸಿದರು.
ಜಾತಿ ಗಣತಿ ಎನ್ನುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಮುಖ ಅಂಶವಾಗಿದೆ. ಜಾತಿಗಣತಿ ಜಾರಿಗೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಪ್ರಪಂಚವೇ ತಲೆ ಕೆಳಗಾಗಲಿ ಜಾತಿಗಣತಿ ಅನುಷ್ಠಾನ ಆಗಲೇಬೇಕು. ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ ಗೊತ್ತಿಲ್ಲ? ಜಾತಿ ಗಣತಿ ಮತ್ತು ವರದಿ ಏನಿದೆ ಅದನ್ನು ತಕ್ಷಣ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದರು.