ಮೈಸೂರು : ದಸರಾ ಮುಗಿದ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟೆ ಕೊಡ್ತಾರೆ. ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ. ಮತ್ತೊಂದು ಕಡೆಗೆ ಸಚಿವರು ರಾಜ್ಯ ಪ್ರವಾಸ ಮಾಡುತ್ತಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಮಾತೇ ಇಲ್ಲ. ಎಂದು ಮೈಸೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು.
ಸರ್ಕಾರ ಬದುಕಿದಿಯೋ, ಸತ್ತಿದ್ಯೋ ಎಂದು ಜನರೇ ಪ್ರಶ್ನಿಸುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಪರವಾಗಿ ಜಿ ಟಿ ದೇವೇಗೌಡ ಅವರು ಬ್ಯಾಟಿಂಗ್ ಬೀಸಿದ್ದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಹೆಚ್ ಡಿ ಕುಮಾರಸ್ವಾಮಿಗೆ ಇದೆ ಅದು ಅವರ ವೈಯಕ್ತಿಕ ವಿಚಾರ ನಾನು ಅದರ ಬಗ್ಗೆ ಟೀಕಿಸುವುದಿಲ್ಲ.
ಚನ್ನಪಟ್ಟಣ ಉಪಚುನಾವಣೆ ಕುರಿತಾಗಿ, ದೆಹಲಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಅಗರ್ವಾಲ್ ಚರ್ಚಿಸಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗಿದೆ ಎಂದು ನನಗೆ ಸರಿಯಾಗಿ ಮಾಹಿತಿ ಇಲ್ಲ. ಟಿಕೆಟ್ ವಿಚಾರವಾಗಿ ಹೈಕಮಾಂಡ್ ಜೊತೆಗೆ ಮಾತನಾಡುತ್ತೇನೆ. ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ತನ್ನದೇ ಆದ ಶಕ್ತಿ ಹೊಂದಿದ್ದಾರೆ. ಉಪಚುನಾವಣೆ ಟಿಕೆಟ್ ಕೇಳುವುದು ನ್ಯಾಯ ಸಮ್ಮತವಾಗಿದೆ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.