ತುಮಕೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಒಂದು ಕಡೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿ ಸಂಕಷ್ಟ ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಇದರ ಮಧ್ಯ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕ್ರಮದಲ್ಲಿ ದಲಿತ ಮುಖಂಡರಿಂದ ಈ ಒಂದು ಘೋಷಣೆ ಮಾಡಲಾಯಿತು.
ತುಮಕೂರಿನ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ದಲಿತ ಮುಖಂಡರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.