ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಕಡತ ನಾಪತ್ತೆಯಾಗಿದ್ದಾವೆ. ಇದಕ್ಕೆ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ ಪಿ ಸಜಿತ್ ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಅವರಿಗೆ ಆರ್ ಟಿಐ ಕಾರ್ಯದರ್ತ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದಾರೆ.
ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸಚಿವ ಭೈರತಿ ಸುರೇಶ್ ಅವರು ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.
ಸಚಿವ ಭೈರತಿ ಸುರೇಶ್ ಅವರು ತೆಗೆದುಕೊಂಡು ಹೋಗಿದ್ದಂತ ಪ್ರಮುಖ ಕಡತಗಳನ್ನು ಇಟ್ಟುಕೊಂಡೇ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಇದಕ್ಕೆ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದಂತ ಸುಜೀತ್ ಸಹಾಯ ಮಾಡಿದ್ದಾರೆ. ಹೀಗಾಗಿ ಅವರನ್ನು ಬೆಂಗಳೂರಿನ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಎಲ್ಲಾ ನಿಟ್ಟಿನಲ್ಲಿ ದೂರನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ.
ರಾಜಕೀಯ ಅನಾಥ ಶಿಶುವನ್ನು ಗುರುತಿಸಿ ಸ್ಥಾನಮಾನ ನೀಡಿದ್ದು ಬಿಜೆಪಿ: ಛಲವಾದಿ ನಾರಾಯಣಸ್ವಾಮಿ
‘ಹಾರ್ಡ್ ಡ್ರಿಂಕ್ಸ್’ ಕುಡಿಯೋದಕ್ಕಿಂತ ‘ಬಿಯರ್’ ಕುಡಿಯುವುದು ಆರೋಗ್ಯಕರವೇ? ಇಲ್ಲಿದೆ ಮಾಹಿತಿ
BIG NEWS: ಸರ್ಕಾರದ ಎಲ್ಲಾ ಇಲಾಖೆ ‘ನಾಮಫಲಕ’ಗಳನ್ನು ‘ಕನ್ನಡ’ದಲ್ಲೇ ಪ್ರದರ್ಶಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ