ಬೆಂಗಳೂರು: ಪದವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೊಸ ಸ್ನಾತಕ ಕೋರ್ಸ್, ವಿಷಯಗಳನ್ನು ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಪುಕರಣ 59ರಡಿ ಕ್ರಮವಹಿಸುವ ಸಂಯೋಜನಾ ಪುಸ್ತಾವನೆಗಳಿಗೆ ಸಂಬಂಧಿಸಿದಂತೆ, 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನಾ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ದಿನಾಂಕ ನಿಗದಿಪಡಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ, ಇಲಾಖಾ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು ಕಾಲೇಜಿಗೆ ಅಗತ್ಯವಿರುವ ಹೊಸ ಸ್ನಾತಕ ಕೋರ್ಸ್ / ವಿಷಯಗಳ ಬಗ್ಗೆ, ಹೊಸ ಸಂಯೋಜನೆ / ಶಾಶ್ವತ ಸಂಯೋಜನೆ ಬಗ್ಗೆ ವಿದ್ಯಾರ್ಥಿ ಪ್ರಮಾಣ ಹೆಚ್ಚಳ / ಕಡಿಮೆ ಮಾಡುವ ಹಾಗೂ ಇತರೆ ಬದಲಾವಣೆಗಳ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಈ ಸುತ್ತೋಲೆಯೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯ ಅನುಬಂಧದಲ್ಲಿ ಸೂಚಿಸಿರುವಂತೆ ದಿನಾಂಕ: 25.10.2024 ರೊಳಗೆ ಕೇಂದ್ರ ಕಛೇರಿಗೆ ಇ-ಮೇಲ್ ವಿಳಾಸ : dce.affiliation@gmail.com (excel and pdf form) ಮೂಲಕ ಪಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಹೇಳಿದ್ದಾರೆ.
ಉಲ್ಲೇಖಿತ ಸರ್ಕಾರದ ಆದೇಶದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನಾ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ದಿನಾಂಕ ನಿಗದಿಪಡಿಸಿ ಆದೇಶಿಸಿರುವುದರಿಂದ ದಿನಾಂಕ : 25.10.2024 ರ ನಂತರ ಸ್ವೀಕೃತವಾಗುವ ಪುಸ್ತಾವನೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
ಮುಂದುವರೆದು, ಕಾಲೇಜುಗಳಿಂದ ಸ್ವೀಕೃತವಾದ ಪುಸ್ತಾವನೆಗಳಿಗೆ ಸರ್ಕಾರದ ಅನುಮೋದನೆ ಪಡೆದು ದಿನಾಂಕ : 10.11.2024 ರೊಳಗಾಗಿ ಕಾಲೇಜುಗಳಿಗೆ ಹೊಸ ಕೋರ್ಸ್ / ವಿಷಯಗಳು ಹಾಗೂ ಬದಲಾವಣೆಗಳಿಗೆ ನೀಡಿದ ಅನುಮತಿಯಂತೆ ದಿನಾಂಕ : 15.11.2024 ರೊಳಗಾಗಿ ಕಾಲೇಜುಗಳು ವಿಶ್ವವಿದ್ಯಾಲಯಗಳ ಸಂಯೋಜನೆಗೆ UUCMS ಮೂಲಕ ಪುಸ್ತಾವನೆ ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇಲಾಖೆಯ ಅನುಮತಿಯಿಲ್ಲದೆ ಹೊಸ ಕೋರ್ಸ್ / ವಿಷಯಗಳನ್ನು ಪ್ರಾರಂಭಿಸಲು ಅಥವಾ ಶಾಶ್ವತ ಸಂಯೋಜನೆಗೆ ಪ್ರಸ್ತಾವನೆಗಳನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಲು ಅವಕಾಶವಿರುವುದಿಲ್ಲ. ಒಂದುವೇಳೆ ಇಲಾಖಾ ಅನುಮತಿಯಿಲ್ಲದೆ ಪ್ರಸ್ತಾವನೆಗಳನ್ನು ಪ್ರಾಂಶುಪಾಲರುಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂಬುದಾಗಿ ಎಚ್ಚರಿಸಿದ್ದಾರೆ.
‘ಹಾರ್ಡ್ ಡ್ರಿಂಕ್ಸ್’ ಕುಡಿಯೋದಕ್ಕಿಂತ ‘ಬಿಯರ್’ ಕುಡಿಯುವುದು ಆರೋಗ್ಯಕರವೇ? ಇಲ್ಲಿದೆ ಮಾಹಿತಿ
BIG NEWS: ಸರ್ಕಾರದ ಎಲ್ಲಾ ಇಲಾಖೆ ‘ನಾಮಫಲಕ’ಗಳನ್ನು ‘ಕನ್ನಡ’ದಲ್ಲೇ ಪ್ರದರ್ಶಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ