ಕರಾಚಿ: ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ
ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ರಾತ್ರಿ 11 ಗಂಟೆಗೆ (ಸ್ಥಳೀಯ ಕಾಲಮಾನ) ಟ್ಯಾಂಕರ್ ಸ್ಫೋಟಗೊಂಡಾಗ ಈ ಘಟನೆ ನಡೆದಿದೆ ಎಂದು ಪಾಕಿಸ್ತಾನದಲ್ಲಿರುವ ಚೀನಾದ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
“ಈ ಕಷ್ಟದ ಸಮಯದಲ್ಲಿ ಗಾಯಗೊಂಡವರು ಮತ್ತು ಅವರ ಕುಟುಂಬಗಳಿಗೆ ನಮ್ಮ ಆಳವಾದ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ” ಎಂದು ಪಾಕಿಸ್ತಾನದಲ್ಲಿನ ಚೀನಾದ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
“ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾದ ನಾಗರಿಕರು, ಸಂಸ್ಥೆಗಳು ಮತ್ತು ಯೋಜನೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನದ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ” ಎಂದು ರಾಯಭಾರ ಕಚೇರಿ ತಿಳಿಸಿದೆ.
ಈ ಘಟನೆಯ ನಂತರ, ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ಕರಾಚಿ ವಿಮಾನ ನಿಲ್ದಾಣದಿಂದ ಆಗಮಿಸುವ ಚೀನಾದ ಎಂಜಿನಿಯರ್ಗಳು ಮತ್ತು ಹೂಡಿಕೆದಾರರ ಉನ್ನತ ಮಟ್ಟದ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆದ ಆತ್ಮಾಹುತಿ ಬಾಂಬ್ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.
ಶಂಕಿತ ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ಸ್ಫೋಟ ಸಂಭವಿಸಿದೆ ಎಂದು ಸಿಂಧ್ ಗೃಹ ಸಚಿವ ಜಿಯಾವುಲ್ ಹಸನ್ ಲಂಜರ್ ಜಿಯೋ ನ್ಯೂಸ್ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ನಗರದಾದ್ಯಂತದ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದರು .