ಉಡುಪಿ : ನಿನ್ನೆ ಸಂಜೆ 4 ಗಂಟೆಯ ಸುಮಾರಿಗೆ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘಸ್ಫೋಟವಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ.
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿತ್ತು. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಚಂದ್ರಾಗೌಡ್ತಿ (85) ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದ್ದು, ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.