ಬೆಂಗಳೂರು: ದಿನಾಂಕ 10-10-2024ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಇಂದು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಹಂಚಿಕೊಂಡಿದ್ದು ದಿನಾಂಕ 10-10-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 21ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಅ.10ರಂದು ನಡೆಯುವಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ಅಭಿವೃದ್ಧಿ ಕಾಮಗಾರಿಗಳು, ಜನಪರ ಕಾರ್ಯಗಳಿಗೆ ಅನುದಾನ ಒದಗಿಸುವುದು ಸೇರಿದಂತೆ ವಿವಿಧ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.
BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್
ಯುವತಿಯ ಹೊಟ್ಟೆಯಲ್ಲಿ ಬರೋಬ್ಬರಿ 2 ಕೆಜಿ ಕೂದಲು ಪತ್ತೆ | Hair Found in Woman’s Stomach