ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೌದು ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ.
ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಂತೆ ಬೆಂಗಳೂರು ದಕ್ಷಿಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.