Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗ್ರಾಮ ಪಂಚಾಯ್ತಿಗಳಲ್ಲಿ ‘ಗ್ರಾಮಸಭೆ’ ನಡೆಸಲು ಮಾರ್ಗಸೂಚಿ ಬಿಡುಗಡೆ: ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BREAKING: ಗ್ರಾಮ ಪಂಚಾಯ್ತಿಗಳಲ್ಲಿ ‘ಗ್ರಾಮಸಭೆ’ ನಡೆಸಲು ಮಾರ್ಗಸೂಚಿ ಬಿಡುಗಡೆ: ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0907/10/2024 3:59 PM

ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು, ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ ಎಂದು ಸಚಿವರು ಹೇಳಿದರು.

ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ, ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಸಭೆಗಳನ್ನು ಕರೆಯುವ ವಿಧಾನ, ಸಭೆಗಳಲ್ಲಿ ಪಾಲ್ಗೊಳ್ಳ ಬೇಕಾದ ಇಲಾಖಾ ಅಧಿಕಾರಿಗಳು-ನೌಕರರ ವಿವರಗಳನ್ನು ಈ ಮಾರ್ಗಸೂಚಿ ಹೊಂದಿದೆ, ಗ್ರಾಮ ಪಂಚಾಯತಿ ಪ್ರದೇಶದಲ್ಲಿ ಜವಾಬ್ದಾರಿ ನಕ್ಷೆಯನುಸಾರ ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಆದ್ಯತೆಯ ನಿರ್ಧಾರ, ಪಡಿತರ ವಿತರಣೆ, ವೃದ್ದಾಪ್ಯ ವೇತನ, ವಿಶೇಷ ಚೇತನರ ವೇತನ, ವಿಧವಾ ವೇತನ ಹಾಗೂ ಇನ್ನಿತರೆ ಸಾಮಾಜಿಕ ಭದ್ರತಾ ಯೋಜನೆಗಳ ವಿವರ ಸಂಗ್ರಹ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಮುಖ್ಯವಾಹಿನಿಗೆ ತಂದ ಬಗ್ಗೆ ಚರ್ಚೆ, ಆಸ್ಪತ್ರೆ ಹಾಗೂ ಪಶುವೈದ್ಯ ಶಾಲೆಗಳ ಚಟುವಟಿಕೆಗಳ ಮಾಹಿತಿ, ಜನರ ಹಾಗೂ ಜಾನುವಾರುಗಳ ಆರೋಗ್ಯದ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ನೀರು ಸರಬರಾಜು ವ್ಯವಸ್ಥೆಯನ್ನು ನಿರ್ವಹಿಸಲು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯಿಂದ ಗ್ರಾಮಕ್ಕೆ ಮಾಡಿದ ವೆಚ್ಚ ಹಾಗೂ ಕೈಗೊಂಡ ಕ್ರಮ, ಶೌಚಾಲಯಗಳ ನಿರ್ಮಾಣ ಮಾಹಿತಿ, ಸಹಾಯಧನ ನೀಡಿರುವ ವಿವರ, ಅಂಗನವಾಡಿ ಕೇಂದ್ರದ ಚಟುವಟಿಕೆಗಳ ಬಗ್ಗೆ ಚರ್ಚೆ, ಗ್ರಾಮ ಪಂಚಾಯತಿಯ ವಿವಿಧ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗ್ರಾಮದ ಫಲಾನುಭವಿಗಳ ಆಯ್ಕೆ ಮಾಡಲು ಗ್ರಾಮ ಸಭೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಗ್ರಾಮ ಪಂಚಾಯತಿಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಗ್ರಾಮ ಸಭೆಗಳು ಸಹಾಯಕವಾಗಿದ್ದು ಗ್ರಾಮಗಳನ್ನು ಬಲಯುತಗೊಳಿಸಲು ಸಹಾಯಕವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮ ಸಭೆಗಳನ್ನು ಆಯೋಜಿಸುವ ಸಂಬಂಧ ತಾಲ್ಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನೂ ಸಹ ಈ ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿರುವ ಗ್ರಾಮೀಣಾಭಿವೃದ್ಧಿ ಸಚಿವರು ತಾಲ್ಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.

ಗ್ರಾಮಸಭೆಗಳನ್ನು ನಡೆಸುವಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಅತಿ ಮುಖ್ಯವಾಗಿದ್ದು, ಜನವಸತಿ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳಲ್ಲಿ ಹೆಚ್ಚು ಮಂದಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಬೇಕು, ಗ್ರಾಮ ಪಂಚಾಯತಿಗಳು ಸ್ಥಳೀಯ ಸರ್ಕಾರಗಳಾಗಿ ಕಾರ್ಯ ನಿರ್ವಹಿಸುವ ಮೂಲಕ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.

ಮುಖ್ಯಾಂಶಗಳು

• ಗ್ರಾಮ ಪಂಚಾಯತಿಗಳಲ್ಲಿ ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯ
• ಕಾರ್ಯಾಚರಣೆ ವಿಧಾನದ ಮಾರ್ಗಸೂಚಿ ಬಿಡುಗಡೆ
• ಜವಾಬ್ದಾರಿ ನಕ್ಷೆಯನುಸಾರ ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳಿಗೆ ಆದ್ಯತೆ.
• ಗ್ರಾಮಸಭೆಗೂ ಒಂದು ತಿಂಗಳು ಮುನ್ನ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳ ಏರ್ಪಾಟು
• ಗ್ರಾಮ ಪಂಚಾಯತಿಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಗ್ರಾಮ ಸಭೆಗಳು ಸಹಾಯಕ
• ತಾಲ್ಲೂಕು ಪಂಚಾಯತಿಯ ಕಾರ್ಯಾನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಸಭೆ ಆಯೋಜಿಸುವ ಜವಾಬ್ದಾರಿ
• ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಮುಖ್ಯ
• ಗ್ರಾಮೀಣ ಪ್ರದೇಶದ ಬಡ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಗಳನ್ನು ತಲುಪಿಸಲು ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ.

ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.