Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರೇ ಗಮನಿಸಿ : ನಿಮ್ಮ` ಫಾಸ್ಟ್ ಟ್ಯಾಗ್’ ಬ್ಯಾಲೆನ್ಸ್ ಎಷ್ಟಿದೆ ಎಂದು ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

25/03/2026 10:22 AM

BREAKING : ರಾಜ್ಯ ಸರ್ಕಾರದಿಂದ ‘BPL’ ಪಡಿತರಿಗೆ ಗುಡ್ ನ್ಯೂಸ್ : ವಾರ್ಷಿಕ ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ!

25/03/2026 10:18 AM

ಟ್ರಂಪ್‌ ಶಾಂತಿ ಯೋಜನೆಗೆ ಇರಾನ್ ಪ್ರತಿಯೇಟು: ‘ಗಲ್ಫ್ ರಾಷ್ಟ್ರಗಳಿಂದ ಅಮೆರಿಕ ಸೇನೆ ಹೊರನಡೆಯಲಿ’ ಸೇರಿದಂತೆ ಪ್ರಮುಖ ಬೇಡಿಕೆಗಳು ಇಲ್ಲಿವೆ!

25/03/2026 10:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ
KARNATAKA

JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

By kannadanewsnow0907/10/2024 4:50 PM

ಬಳ್ಳಾರಿ : ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಎಂದು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದ್ದು, ಅವುಗಳ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಬಳ್ಳಾರಿ-ಚಿಕ್ಕಜಾಜೂರು ಮಾರ್ಗದ 185 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ 3,080 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಪ್ರಸ್ತಕ ವರ್ಷದಲ್ಲಿ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಇನ್ನೆರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅದೇರೀತಿಯಾಗಿ ಸ್ವಾಮಿಹಳ್ಳಿ-ರಾಯದುರ್ಗ ಮಾರ್ಗದ 52 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ ತಾಂತ್ರಿಕ ಪರಿಶೀಲನೆ ನಡೆಸಲಾಗಿದೆ. ನಂತರ ಡಿಪಿಆರ್ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.

ಬಳ್ಳಾರಿ-ಹೊಸಪೇಟೆ ಮಾರ್ಗದಲ್ಲಿ ನಾಲ್ಕು ಟ್ರಾö್ಯಕ್ ಹಳಿಯ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ದಗೊಳ್ಳುತ್ತಿದೆ. ಈ ಭಾಗದ ವಿವಿಧ ಕಾರ್ಖಾನೆಗಳಿಗೆ ರೈಲ್ವೆ ಅಭಿವೃದ್ಧಿಗೆ ಸುಮಾರು 3 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತದೆ. ವ್ಯಾಸನಕೆರೆ-ಅಮರಾವತಿ ಕಾಲೋನಿ ಮಾರ್ಗದ 20 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ, ತೋರಣಗಲ್ಲು-ರಣಜಿತ್‌ಪುರ ಮಾರ್ಗದ 29 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ 16.66 ಕೋಟಿ ರೂ. ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣಕ್ಕೆ 15.17 ಕೋಟಿ ರೂ. ಅನುದಾನದಲ್ಲಿ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು, ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕು ಎಂದು ತಿಳಿಸಿದ ಸಚಿವರು, ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್‌ಪೋರ್ಟ್ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟç ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿ.ಮೀ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಲು ಮೂರು ರಾಜ್ಯಗಳು ತಾತ್ವಿಕ ಒಪ್ಪಿಗೆ ನೀಡಿದ್ದು, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚಿಸಲಾಗಿದೆ ಎಂದರು.

ಅತೀ ಕಡಿಮೆ ಪ್ರಯಾಣದರದಲ್ಲಿ ಬಡವರು, ಸಣ್ಣ ಪುಟ್ಟ ವ್ಯಾಪಾರಿಗಳ ಅನುಕೂಲಕ್ಕಾಗಿ ಪ್ರಮುಖ ನಗರಗಳಿಗೆ ರೈಲು ಸಂಪರ್ಕ ಕಲ್ಪಿಸುವ ದೃಷ್ಠಿಯಿಂದ ಡೆಮೋ ರೈಲುಗಳನ್ನು ಓಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವಂತೆ ಕ್ರಮ ವಹಿಸಲಾಗುವುದು ಎಂದರು.

ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

ಕನ್ನಡದಲ್ಲೆ ರೈಲ್ವೆ ಪರೀಕ್ಷೆ

ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ಬಳ್ಳಾರಿ ಸಂಸದ ಈ.ತುಕಾರಾಂ ಅವರು ಸಭೆಯಲ್ಲಿ ಮಾತನಾಡಿ, ಬಳ್ಳಾರಿ ನಗರದ ಎಸ್.ಎನ್.ಪೇಟೆ ರೈಲ್ವೆ ಕೆಳಸೇತುವೆ ಮಳೆ ನೀರು ಸಂಗ್ರಹಗೊAಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದ್ದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಸಚಿವರ ಗಮನಕ್ಕೆ ತಂದರು. ಅದೇರೀತಿಯಾಗಿ ನಗರದ ಮೋತಿ ವೃತ್ತದ ಬಳಿಯ ರೈಲ್ವೆ ಮೇಲ್ಸೇತುವೆ ವಿಸ್ತರಣಾ ಕಾಮಗಾರಿ ಕೈಗೊಳ್ಳಬೇಕು. ಹೊಸಪೇಟೆಯ ಅನಂತಶಯನಗುಡಿ ಬಳಿಯ ಆರ್‌ಓಬಿ, ಸಿದ್ದಮ್ಮನಹಳ್ಳಿ ಬಳಿಯ ಆರ್‌ಓಬಿಗಳ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪುನಃ ಆರಂಭಿಸಬೇಕು ಎಂದು ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು, ರೈಲ್ವೆ ಅಧಿಕಾರಿಗಳು ಜಿಲ್ಲೆಯಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದ ಆರ್‌ಓಬಿ ಕಾಮಗಾರಿಗಳನ್ನು ಸಂಬಂಧಿಸಿದ ಇಂಜಿನಿಯರ್ ಮೂಲಕ ಗುತ್ತಿಗೆದಾರರಿಗೆ ತಿಳಿಸಿ, ಕೂಡಲೇ ಪ್ರಾರಂಭಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ನಗರದ ಮಧ್ಯಭಾಗದ ಕನಕದುರ್ಗಮ್ಮ ದೇವಸ್ಥಾನ ಬಳಿಯ ರೈಲ್ವೆ ಸೇತುವೆ ವಿಸ್ತರಣಾ ಕಾಮಗಾರಿಗೆ ಈಗಾಗಲೇ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 9 ಕೋಟಿ ರೂ. ಚೆಕ್ ಹಸ್ತಾಂತರಿಸಿದ್ದು, ಕಾಮಗಾರಿ ಆರಂಭಗೊAಡಿಲ್ಲ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸಚಿವರು, ಸಂಬಂಧಿಸಿದ ಕಾರ್ಯಪಾಲಕ ಇಂಜಿನಿಯರ್ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಸಭೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ರೈಲ್ವೆ ಹಿರಿಯ ಅಧಿಕಾರಿ ಅಜಯ್ ಶರ್ಮಾ, ಹುಬ್ಬಳ್ಳಿಯ ಡಿಆರ್‌ಎಂ ಹರ್ಷ ಖಾರೆ, ಬಳ್ಳಾರಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಉಪವಿಭಾಗಾಧಿಕಾರಿ ಪ್ರಮೋದ್ ಹಾಗೂ ಕಂದಾಯ ಇಲಾಖೆ, ರೈಲ್ವೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಗಮನಿಸಿ : ನಿಮ್ಮ` ಫಾಸ್ಟ್ ಟ್ಯಾಗ್’ ಬ್ಯಾಲೆನ್ಸ್ ಎಷ್ಟಿದೆ ಎಂದು ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

25/03/2026 10:22 AM1 Min Read

BREAKING : ರಾಜ್ಯ ಸರ್ಕಾರದಿಂದ ‘BPL’ ಪಡಿತರಿಗೆ ಗುಡ್ ನ್ಯೂಸ್ : ವಾರ್ಷಿಕ ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ!

25/03/2026 10:18 AM1 Min Read

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

25/03/2026 10:04 AM1 Min Read
Recent News

ವಾಹನ ಸವಾರರೇ ಗಮನಿಸಿ : ನಿಮ್ಮ` ಫಾಸ್ಟ್ ಟ್ಯಾಗ್’ ಬ್ಯಾಲೆನ್ಸ್ ಎಷ್ಟಿದೆ ಎಂದು ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

25/03/2026 10:22 AM

BREAKING : ರಾಜ್ಯ ಸರ್ಕಾರದಿಂದ ‘BPL’ ಪಡಿತರಿಗೆ ಗುಡ್ ನ್ಯೂಸ್ : ವಾರ್ಷಿಕ ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ!

25/03/2026 10:18 AM

ಟ್ರಂಪ್‌ ಶಾಂತಿ ಯೋಜನೆಗೆ ಇರಾನ್ ಪ್ರತಿಯೇಟು: ‘ಗಲ್ಫ್ ರಾಷ್ಟ್ರಗಳಿಂದ ಅಮೆರಿಕ ಸೇನೆ ಹೊರನಡೆಯಲಿ’ ಸೇರಿದಂತೆ ಪ್ರಮುಖ ಬೇಡಿಕೆಗಳು ಇಲ್ಲಿವೆ!

25/03/2026 10:17 AM

‘U-turn Ustad’:ಮಹಿಳಾ ಮೀಸಲಾತಿ ಜಾರಿಗೆ ವಿಶೇಷ ಅಧಿವೇಶನ ಕರೆಯುವ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ಕಿಡಿ!

25/03/2026 10:13 AM
State News
KARNATAKA

ವಾಹನ ಸವಾರರೇ ಗಮನಿಸಿ : ನಿಮ್ಮ` ಫಾಸ್ಟ್ ಟ್ಯಾಗ್’ ಬ್ಯಾಲೆನ್ಸ್ ಎಷ್ಟಿದೆ ಎಂದು ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

By kannadanewsnow5725/03/2026 10:22 AM KARNATAKA 1 Min Read

ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು ಉಳಿಸಲು ಫಾಸ್ಟ್ಟ್ಯಾಗ್ (FASTag) ಅನಿವಾರ್ಯವಾಗಿದೆ. ಆದರೆ ಪ್ರಯಾಣದ ಸಮಯದಲ್ಲಿ ಫಾಸ್ಟ್ಟ್ಯಾಗ್ನಲ್ಲಿ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ…

BREAKING : ರಾಜ್ಯ ಸರ್ಕಾರದಿಂದ ‘BPL’ ಪಡಿತರಿಗೆ ಗುಡ್ ನ್ಯೂಸ್ : ವಾರ್ಷಿಕ ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ!

25/03/2026 10:18 AM

BREAKING : ಬಾಗಲಕೋಟೆಯಲ್ಲಿ ಸಿಲಿಂಡರ್ ಸ್ಕೋಟಗೊಂಡು ಮನೆ ಛಿದ್ರ, ಛಿದ್ರ : ತಾಯಿ ಮಗನಿಗೆ ಗಂಭೀರ ಗಾಯ!

25/03/2026 10:04 AM

ಬಾಡಿಗೆ ಒಪ್ಪಂದ 11 ತಿಂಗಳಿಗೆ ಮಾತ್ರ ಏಕೆ ಇರುತ್ತೆ ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

25/03/2026 10:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.