ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಆಗಿರುವಂತ ಅಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿಂದಿನ ಆರ್ಥಿಕ ಸಲಹೆಗಾರ ಹಾಗೂ ಪ್ರಸ್ತುತ ಕಿದ್ವಾಯಿ ಸ್ಮರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ರಘು ಜಿ.ಪಿ ಎಂಬುವರನ್ನು ರಾಜ್ಯ ಸರ್ಕಾರ ಅಮಾತನಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನ ಇಲ್ಲದ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕುರಿತಂತೆ ತನಿಖೆ ನಡೆಸಲು ಕುರಿತಂತೆ ರಚಿಸಲಾದ ತನಿಖಾ ಸಮಿತಿಯು ನೀಡಿರುವ ವರದಿಯನ್ವಯ ಸದರಿ ಅವಧಿಯಲ್ಲಿ ಅಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ವೈದ್ಯಕೀಯ ಶಿಕ್ಷಣ ಇಲಾಖೆ, ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಶ್ರೀ ರಘು ಜಿ.ಪಿ., ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 13ರಡಿ ಜಂಟಿ ಇಲಾಖಾ ವಿಚಾರಣೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ. ಆದುದರಿಂದ, ಇದೇ ನಿಯಮಾವಳಿಯ ನಿಯಮ 15ರಡಿ ಶ್ರೀ ರಘು ಜಿ.ಪಿ., ಆರ್ಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ವಿರುದ್ಧ ಜಂಟಿ ಇಲಾಖಾ ವಿಚಾರಣೆ ಕೈಗೊಳ್ಳಲು, ಅನುಮತಿ ನೀಡುವಂತೆ ಕೋರಲಾಗಿದೆ ಎಂದಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ, ಸರ್ಕಾರದ ಆಡಳಿತಾತ್ಮಕ ಅನುಮೋದನ ಇಲ್ಲದ ಸಾಮಗ್ರಿಗಳ ಖರೀದಿ ಮತ್ತು ಕೆಲವು ಅಭ್ಯರ್ಥಿಗಳಿಗೆ ಮಾತ್ರ ನೇಮಕಾತಿ ಆದೇಶ ಕುರಿತಂತ ತನಿಖೆ ನಡೆಸಲು ನೇಮಿಸಲಾದ ಸಮಿತಿಯು ಕೋವಿಡ್-19 ಮೊದಲನೇ ಅಲೆ ಮತ್ತು ಎರಡನೇ ಅಲೆಗೆ ಸಂಬಂಧಪಟ್ಟ ಕಡತಗಳು ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ದಿನಾಂಕ: 27.12.2023ರಂದು ನೀಡಿದ ತನಿಖಾ ವರದಿಯಲ್ಲಿ ಪಿಪಿಇ ಕಿಟ್ ಹಾಗೂ ಇತರ ಸಾಮಾತ್ರಿಗಳನ್ನು ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ KTPP ಕಾಯ್ದೆಯ ಉಲ್ಲಂಘನೆ, ಕರ್ತವ್ಯಲೋಪ ಹಾಗೂ ಕಾರ್ಯವಿಧಾನಗಳನ್ನು ಪಾಲಿಸದೆ ಇರುವುದು ಮೋಲ್ನೋಟಕ್ಕೆ ಕಂಡುಬಂದಿದೆ. ಈ ಉಲ್ಲಂಘನೆಗೆ ಕಾರಣರಾದ ಅಂದಿನ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಆರ್ಥಿಕ ಸಲಹೆಗಾರರು ಹಾಗೂ ಆರೋಗ್ಯ ಸಲಕರಣಾಧಿಕಾರಿರವರ ವಿರುದ್ಧ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬಹುದಾಗಿರುತ್ತದೆ ಎಂದು ಅಭಿಪ್ರಾಯ ನೀಡಿರುತ್ತದೆ ಎಂದು ಹೇಳಿದ್ದಾರೆ.
ತನಿಖಾ ಸಮಿತಿಯ ತನಿಖಾ ವರದಿ ದಿನಾಂಕ: 27.12.2023 ನ್ನು ಪರಿಶೀಲಿಸಲಾಗಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರ ಸಾಮಾಗ್ರಿಗಳನ್ನು ಖರೀದಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ತನಿಖಾ ವರದಿಯಿಂದ ಸ್ಪಷ್ಟವಾಗುತ್ತದೆ. ಶ್ರೀ ಜಿ.ಪಿ. ರಘು, ಜಂಟಿ ನಿಯಂತ್ರಕರು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪ್ರಸ್ತುತ ಆರ್ಥಿಕ ಸಲಹೆಗಾರರು, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಬೆಂಗಳೂರು, ಇವರು ಈ ಪ್ರಕರಣ ನಡೆದ ಅವಧಿಯನ್ನು ಒಳಗೊಂಡಂತೆ ದಿನಾಂಕ: 03.08.2021ರವರೆಗೆ ಆರ್ಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಕರ್ತವ್ಯನಿರ್ವಹಿಸಿದ್ದು ಅಕ್ರಮವೆಸಗಿರುವುದು ತನಿಖಾ ವರದಿ ಹಾಗೂ ದಾಖಲಾತಿಗಳಿಂದಕಂಡುಬರುತ್ತದೆ. ಆದ್ದರಿಂದ, ಇವರನ್ನು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ 10(3) ನ್ನು ಓದಿಕೊಂಡಂತೆ ಇದೇ ನಿಯಮಗಳ ನಿಯಮ 10 (1) (ಡಿ) ರನ್ವಯ ಅಮಾನತ್ತಿನಲ್ಲಿರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಜಿ.ಪಿ. ರಘು, ಜಂಟಿ ನಿಯಂತ್ರಕರು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪ್ರಸ್ತುತ ಆರ್ಥಿಕ ಸಲಹೆಗಾರರು, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಬೆಂಗಳೂರು, ಇವರು ಈ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ 10(3) ನ್ನು ಓದಿಕೊಂಡಂತೆ ಇದೇ ನಿಯಮಗಳ ನಿಯಮ 10 (1) (ಡಿ) ರನ್ವಯ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಆರೋಪಿತ ಅಧಿಕಾರಿಯು ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 98(1)ರನ್ವಯ ಜೀವನಾಂಶ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಆರೋಪಿತ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಲಿಖಿತ ಪೂರ್ವಾನುಮತಿಯಿಲ್ಲದೇ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗದಂತೆ ಸೂಚಿಸಿದ್ದಾರೆ.
ಬೆಂಗಳೂರಲ್ಲಿ ಅನಧಿಕೃತವಾಗಿ ‘ಕೊಳವೆ ಬಾವಿ’ ಕೊರೆಯುವವರೇ ಹುಷಾರ್.!: BBMPಯಿಂದ ‘FIR’ ದಾಖಲು
ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು