ಬೆಂಗಳೂರು: ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು” ಎಂದು ಅವರು ತಿಳಿಸಿದರು.
ಇ-ಖಾತಾ ಹೆಲ್ಪ್ ಡೆಸ್ಕ್
ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಸಚಿವರು, “ ಆಸ್ತಿ ಮಾಲೀಕರು ಯಾವುದೇ ಗೊಂದಲವಿಲ್ಲದೆ, ಸುಲಭವಾಗಿ ಇ-ಖಾತಾ ಪಡೆಯುವ ಸಲುವಾಗಿ ತತಕ್ಷಣ ಜಾರಿಯಾಗುವಂತೆ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ (ARO Office) ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ.
ಅಲ್ಲದೆ, ಇ-ಖಾತಾ ಪಡೆಯಲು ಆಸ್ತಿ ಮಾಲೀಕರು ಕೆಲವು ದಾಖಲೆಗಳನ್ನು ನೀಡುವುದು ಅಗತ್ಯವಾಗಿದ್ದು, ಅವುಗಳನ್ನು ʼಬೆಂಗಳೂರು ಒನ್ʼ ಕಚೇರಿಗಳ ಮುಖಾಂತರ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಮುಂದಿನ ಎರಡು-ಮೂರು ದಿನಗಳಲ್ಲಿ ಬೆಂಗಳೂರು-ಒನ್ ಕಚೇರಿಗಳಲ್ಲಿ ಈ ಸೌಲಭ್ಯವನ್ನು ಒದಗಿಸಲಾಗುವುದು” ಎಂದರು.
BIG NEWS: ರಾಜ್ಯದಲ್ಲಿ ‘ಇ-ಖಾತಾ’ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು