ಬೆಂಗಳೂರು : ಬೆಳ್ಳಂಬೆಳಗ್ಗೆ ಆರ್ ಟಿಒ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ಹಲವಡೆ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಕೋಲಾರ, ಬೀದರ್, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರ ಲೋಕಾಯುಕ್ತ ಎಸ್ ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ 20,000 ರೂ. ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬೀದರ್, ಕೋಲಾರ, ವಿಜಯಪುರ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.