ಮಂಗಳೂರು : ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೃಹತ್ ಡ್ರಗ್ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳಿಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು, ಹಲವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ನೈಜೀರಿಯಾ ಪ್ರಜೆ ಪೀಟರ್ ಇಕೆಡಿ ಬೆಲೆನ್ವೊ ಬಂಧಿತ ಆರೋಪಿಯಾಗಿದ್ದು, ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ 6 ಕೋಟಿ ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.