ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಬಸ್ಗೆ ಸ್ಕೂಟಿ ಒಂದು ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದಂತಹ ಕಾರು ಮಹಿಳೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ಹೌದು ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಸಮೀಪ ಸ್ಕೂಟರ್ಗೆ ಬಿಎಂಟಿಸಿ ಬಸ್ ಗುದ್ದಿ ಮಹಿಳೆ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ ರಸ್ತೆಯಲ್ಲಿ ನಡೆದಿದೆ. ಸೊನ್ನೇನಹಳ್ಳಿಯ ಮಾರುತಿ ನಗರದ ನಿವಾಸಿ ಮೋನಿಕಾ (25) ಮೃತ ಮಹಿಳೆ ಎಂದು ಹೇಳಕಾಗುತ್ತಿದೆ.
ಶೋರೂಂ ಒಂದರಲ್ಲಿ HR ಆಗಿ ಕೆಲಸ ಮಾಡುತ್ತಿದ್ದ ಮೋನಿಕಾ, ಇಂದು ಬೆಳಿಗ್ಗೆ ತಮ್ಮ ಸ್ಕೂಟರ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸ್ಕೂಟರ್ಗೆ ಮುಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಮೋನಿಕಾ ಮೈಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಹರಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.