ಬೆಂಗಳೂರು : ಇಂದು ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್ ಪೋಸ್ಟ್ಗಳಲ್ಲಿ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೀದರ್, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ, ಬೆಳಗಾವಿ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದು, ಹಲವೆಡೆ ನಗದು ವಶಪಡಿಸಿಕೊಂಡಿವುದಾಗಿ ವರದಿಯಾಗಿದೆ.
ಹೌದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ವೇಳೆ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 2 ಲಕ್ಷ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಇನ್ನು ಬಳ್ಳಾರಿ ತಾಲೂಕಿನ ಪಿ.ಡಿ.ಹಳ್ಳಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ, ಜಿಲ್ಲೆಯ ಹಗರಿ ಚೆಕ್ ಪೋಸ್ಟ್ ನಲ್ಲಿ 45,000 ನಗದು ಪತ್ತೆ ಹಚ್ಚಿ, ನಗದು ಹಣ ಸೇರಿದಂತೆ ಹಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಚೆಕ್ಪೋಸ್ಟ್ ನಲ್ಲಿ ದಾಖಲೆ ಇಲ್ಲದ 45,000 ನಗದು ಪತ್ತೆಯಾಗಿದೆ.
ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀದರ್ನ ಹುಮನಾಬಾದ್ ತಾಲೂಕಿನ ಸಮೀಪವಿರುವ ಮೊಳಕೇರಾ ಬಳಿ ಇರುವ ಆರ್ಟಿಒ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. 45,000 ಹಣ ಪತ್ತೆಯಾಗಿದ್ದು, ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಂದೆಡೆ ಲೋಕಾಯುಕ್ತ ಎಸ್ಪಿ ಹನುಮಂತರಾಯ ಅವರ ನೇತೃತ್ವದ ಲೋಕಾಯುಕ್ತ ಸಿಬ್ಬಂದಿ ತಂಡ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಚೆಕ್ ಪೋಸ್ಟ್ ನಲ್ಲಿ 13500 ನಗದು ಪತ್ತೆಯಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ಖಾಸಗಿ ವ್ಯಕ್ತಿಗಳು ಹೋಂ ಗಾರ್ಡ್ಸ್ ಬಳಸಿ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.