ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.