ಬೀದರ್ : ಪೋಷಕರ ಜೊತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮುಕೇಶ್ ಭೀಮಣ್ಣ ಮೊಳಕೆರ (16) ಎಂಬ ಬಾಲಕ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಮೇಹಕರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಕೇಶ್ ಸೋಯಾಬೀನ್ ಕಟಾವಿಗೆ ತೆರಳಿದ್ದ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.