ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅಳಿಯನೊಬ್ಬ ಚಾಕುವಿನಿಂದ ಇರಿದು ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯೊಬ್ಬ ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅತ್ತೆ ಕವಿತಮ್ಮ( 43) ಕೊಲೆಯಾದ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆ ಗಲಾಟೆ ನಡೆದು ಅಳಿಯ ಅತ್ತೆ ಕವಿತಮ್ಮನ ಗಂಟಲಿಗೆ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ.
ಅತ್ತೆಯನ್ನು ಕೊಲೆ ಮಾಡಿದ ಬಳಿಕ ಅಳಿಯ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.