ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಪಾದಚಾರ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ತಾಳಿಕೆರೆ ನಿವಾಸಿ ಅಂಜಿನಪ್ಪ (80) ಎಂದು ಗುರುತಿಸಲಾಗಿದೆ. ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.