ಬೆಂಗಳೂರು: ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಯಾದೃಚ್ಛಿಕರಿಸುವ ಕ್ರಮಕ್ಕೆ ಶಾಲಾ ಪರೀಕ್ಷೆ ಮಂಡಳಿ ಬ್ರೇಕ್ ಹಾಕಿದೆ. ಈ ಮೂಲಕ ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಯಾದೃಚ್ಛಿಕರೀಸುವ ಕ್ರಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ.
ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಯಾದೃಚ್ಛೀಕರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ.
ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯು ಹೊರಡಿಸಿದ್ದಂತ ಸುತ್ತೋಲೆಯನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಎಸ್ ಬಂಗಾರಪ್ಪ ಅವರ ಸೂಚನೆಯಂತೆ ಸದರಿ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ