ಕೊಪ್ಪಳ : ಬೈಕ್ ವೀಲಿಂಗ್ ತಡೆದಿದ್ದಕ್ಕೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪುಂಡರು ಥಳಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೊರವಲಯದಲ್ಲಿ ನಡೆದಿದೆ.
ಗಂಗಾವತಿಯ ಹೊರವಲಯದಲ್ಲಿ ಪುಂಡರು ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ವೇಳೆ ಬೈಕ್ ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದಂತಹ ಮತ್ತೊಬ್ಬ ಕಾನ್ಸ್ಟೇಬಲ್ ಮೇಲು ಹಲ್ಲೆ ಮಾಡಿದ್ದಾರೆ.
ಕೂಡಲೇ ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಪುಂಡರ ವಿರುದ್ಧ ಕಠಿಣ ಅಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಕುರಿತಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.