ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿರುವುದರಿಂದ ಗುಡ್ಡ ಕುಸಿದಿದೆ.
ಕೊಟ್ಟಿಗೆಹಾರ, ಬಾಳೂರು, ಬಣಕಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಮಳೆ ಆರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಈ ವೇಳೆ ರಸ್ತೆಯ ಮೇಲೆ ಮಳೆಯ ನೀರ ನದಿಯಂತೆ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಳೆ ಹಾಗೂ ಗುಡ್ಡ ಕುಸಿತದಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಕಿಲೋ ಮೀಟರ್ ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಅಲ್ಲದೆ ಸವಾರರು ಕೂಡ ತೀವ್ರ ಪರದಾಟ ನಡೆಸುತ್ತಿದ್ದಾರೆ.