ಬೆಂಗಳೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಇಂದು ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಆಗಮಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರಿಂದ, ಸ್ವಾಮೀಜಿ ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.
ಹೌದು ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಪೊಲೀಸರು ಹಾಗೂ ಸ್ವಾಮೀಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಸಿಎಂ ಗೃಹ ಕಚೇರಿ ಒಳಗೆ ಬಿಡುತ್ತಿಲ್ಲವೆಂದು ಪೊಲೀಸರ ವಿರುದ್ಧ ಸ್ವಾಮೀಜಿ ಆಕ್ರೋಶ ಹೊರಹಕಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿಗೆ ಆಗಮಿಸಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ ಕಿಡಿಕಾರಿದ್ದಾರೆ.
ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಜೊತೆ ಆಗಮಿಸಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಖಂಡರು ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ವಂಚಿಸುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಸ್ವಾಮೀಜಿಯವರು ಸಿದ್ದರಾಮಯ್ಯ ಅವರ ಬಳಿ ಮನವಿ ಸಲ್ಲಿಸಲು ಆಗಮಿಸಿದ್ದರು.
ಈ ವೇಳೆ ಪೊಲೀಸರು ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆಗೆ ಬಂದಿದ್ದವರಿಗೆ ಪ್ರವೇಶ ನಿರಾಕರಣೆ ಮಾಡಲಾಯಿತು. ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಿಡುವಂತೆ ಪೊಲೀಸರ ಜೊತೆಗೆ ಸ್ವಾಮೀಜಿ ವಾಗ್ವಾದ ಮಾಡಿದ್ದಾರೆ. ಈ ವೇಳೆ ಸ್ವಾಮಿ ಜೊತೆಗೆ ಇಬ್ಬರಿಗೆ ಮಾತ್ರ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ.