ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರಿಂದ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳ ದಾಟಲು ಬೈಕ್ ಸವಾರನೊಬ್ಬ ಹುಚ್ಚುತನ ಮೆರೆದು, ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಎಡವಾಲದ ಕೊಂಡಜ್ಜಿ ಹಳ್ಳದಲ್ಲಿ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ದಾವಣಗೆರೆ ಜಿಲ್ಲೆಯ ಚಿನ್ನಿಕಟ್ಟೆ ಗ್ರಾಮದ ನಿವಾಸಿ ಇಕ್ಬಾಲ್(35) ನೀರುಪಾಲಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಳ್ಳದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು, ಈ ವೇಳೆ ಸ್ಥಳೀಯರು ಎಷ್ಟೇ ಹೇಳಿದ್ರು ಹಠ ಮಾಡಿ ಇಕ್ಬಾಲ್ ಬೈಕ್ ಹಳ್ಳ ದಾಟಲು ಯತ್ನಿಸಿದ್ದಾನೆ. ಈ ವೇಳೆ ಹಳ್ಳದಲ್ಲಿ ನೀರು ಪಾಲಾಗಿದ್ದಾನೆ.
ಕೂಡಲೇ ಸ್ಥಳೀಯರು ಕುಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.