ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೀಗ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಹೌದು ಅತ್ಯಾಚಾರ ಆರೋಪದ ಅಡಿ ವಿನಯ್ ಕುಲಕರ್ಣಿ ವಿರುದ್ಧ FIR ದಾಖಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಇದೀಗ ಇಂದು ಮತ್ತೆ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ವಿನಯ್ ಕುಲಕರ್ಣಿ ಭೇಟಿಯಾಗಿದ್ದಾರೆ.
ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಸಂತ್ರಸ್ತೇ ಮಹಿಳೆ ನನಗೆ ವಿನಯ್ ಕುಲಕರ್ಣಿ ಅವರು 2022 ರಿಂದ ಪರಿಚಯವಾಗಿದ್ದು, ಹಲವಾರು ಬಾರಿ ನನಗೆ ಅವರು ಹೆದರಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ವಿಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ನಡೆದುಕೊಳ್ಳುವಂತೆ ಹೇಳುತ್ತಿದ್ದರು ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.