ತುಮಕೂರು : ನಟ ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಚೌಡಯ್ಯ ಚಿತ್ರತಂಡಕ್ಕೆ ತುಮಕೂರು ಸಾರಿಗೆ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.
ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತುಮಕೂರು ಸಮೀಪದ ಕೈದಾಳದ ಚಿತ್ರೀಕರಣದ ಸ್ಪಾಟ್ ಬಳಿ ಇನ್ನೋವಾ ಕಾರನ್ನು ಜಪ್ತಿ ಮಾಡಿದ್ದಾರೆ. ಹಳದಿ ಬಣ್ಣದ ಬೋರ್ಡ್ ಬದಲು ವೈಟ್ ಬೋರ್ಡ್ ಇರುವ ಇನ್ನೋವಾ ಕಾರು ಬಳಸಿದ್ದರಿಂದ ಸಾರಿಗೆ ಇಲಾಖೆ ಅಧಿಕಾರಿಗಳು ಕಾರನ್ನು ಜಪ್ತಿ ಮಾಡಿದ್ದಾರೆ.
ಕರ್ನಾಟಕ ಟೂರಿಸ್ಟ್ ಡ್ರೈವರ್ಸ್ ಅಸೋಸಿಯೇಷನ್ ನೀಡಿದ್ದ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್ ಟಿ ಒ ಇನ್ಸ್ ಪೆಕ್ಟರ್ ಷರಿಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಾಹನ ಜಪ್ತಿ ಮಾಡಿದ್ದಾರೆ.