ಬೆಂಗಳೂರು : ಎಲ್ ಕೆಜಿಯಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಗಣಿತ ಕಲಿಕೆಗೆ ಮೂರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಮೂಲ ಗಣಿತ ಕಲಿಕೆಗೆ ಚಿಪಿ-ಪಿಲಿ ಕಾರ್ಯಕ್ರಮ, 6 ರಿಂದ 9 ನೇ ರಗತಿ ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಮರು ಸಿಂಚನ, 3 ರಿಂದ 8 ನೇ ತರಗತಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಬೈಲ್ ಫೋನ್ ಮೂಲಕ ಗಣಿತ-ಗಣಕ ವಿಶೇಷ ತರಗತಿ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ, ಮೊದಲ ಹಂತದಲ್ಲಿ ರಾಜ್ಯದ 93 ಬ್ಲಾಕ್ ಗಳ 9 ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಈ ಕಾರ್ಯಕ್ರಮಗಳು ಜಾರಿಗೆ ಬರಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತರೆ ಶಾಲೆಗಳಿಗೂ ವಿಸ್ತರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.