ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಅಕ್ಟೊಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.