ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರ ವಕೀಲರ ವಾದಕ್ಕೆ ಪ್ರತಿವಾದ ಸಲ್ಲಿಸಿದಂತ ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.
ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಗುತ್ತದೆ. ಇಂದು ಅಂತಿಮ ಹಂತದ ವಿಚಾರಣೆ ನಡೆಯಲಿದ್ದು, ಇಂದು ಅಥವಾ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.