ಅಮರಾವತಿ : ರಸ್ತೆಯಲ್ಲಿ ಮೊಬೈಲ್ ನೋಡಿಕೊಂಡು ಹೋಗುವವರೇ ಎಚ್ಚರ, ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟುತ್ತಿದ್ದ ವೇಳೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು, ಮಹಾರಾಷ್ಟ್ರದ ಅಮರಾವತಿಯ 23 ವರ್ಷದ ಯುವತಿ ಮೊಬೈಲ್‌ನಲ್ಲಿ ಮಾತನಾಡುತ್ತಾ ರಸ್ತೆ ದಾಟುತ್ತಿ ವೇಳೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತ ಯುವತಿಯನ್ನು ಆರತಿ ಸುರೇಶ್ ಮನ್ವಾನಿ ಎಂದು ಗುರುತಿಸಲಾಗಿದೆ.
ಕೊತ್ರೂಡ್‌ನ ಭೇಲ್ಕೆ ನಗರದ ನಿವಾಸಿಯಾಗಿರುವ ಆರತಿ ಸುರೇಶ್ ನಾಂದೇಡ್ ದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೊತ್ತೂರು ಬಸ್ ನಿಲ್ದಾಣದಿಂದ ರಸ್ತೆ ದಾಟುವಾಗ ತನ್ನ ಸ್ನೇಹಿತೆಯ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.