ಬೆಂಗಳೂರು: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಗಣೇಶ್, ಕ್ರೈಂ ಗಣೇಶ್ ಎಂಬುದಾಗಿಯೇ ಖ್ಯಾತರಾಗಿದ್ದಂತ ಪತ್ರಕರ್ತರು. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಗರದ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧರಾಗಿದ್ದಾರೆ. ಈ ಮೂಲಕ ಕ್ರೈಂ ಗಣೇಶ್ ಎಂದೇ ಖ್ಯಾತರಾಗಿದ್ದಂತ ಪತ್ರಕರ್ತ ಗಣೇಶ್ ಇನ್ನಿಲ್ಲವಾಗಿದ್ದಾರೆ.
ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಸಂಜೆ 5ಕ್ಕೆ ಅಂತ್ಯ ಸಂಸ್ಕಾರ ನೆರವೇರಲಿದೆ.
ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್ ಎಂದು ಪರಿಚಿತರಾಗಿದ್ದ ಗಣೇಶ್ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಸ್ತೂರಿ, ನ್ಯೂಸ್ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್ ಅವರು ಪ್ರಸ್ತುತ ಟಿವಿ 5 ನಲ್ಲಿ ಇನ್ ಪುಟ್ ಚೀಫ್ ಅಗಿ ಸೇವೆ ಸಲ್ಲಿಸುತ್ತಿದ್ದರು.
ಗಣೇಶ್ ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ ಕಂಬನಿ ಮಿಡಿದಿದೆ. ಅದೇ ರೀತಿ ಹಲವಾರು ಗಣ್ಯರು, ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ
ಪೋರ್ನ್ ಸ್ಟಾರ್ `ಮಿಯಾ ಖಲೀಫಾ’ ಜೊತೆ ಪಾಕ್ ಮಾಜಿ ಕ್ರಿಕೆಟಿಗನ ವಿಡಿಯೋ ವೈರಲ್ !