ಬೆಂಗಳೂರು: ರಾಜ್ಯ ಸರ್ಕಾರದಿಂದ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” – ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ ದಿನಾಂಕ:17.10.2024 ರಂದು “ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ ಎಂದಿದೆ.
ಆದರೆ ಮಡಿಕೇರಿ( ಕೊಡಗು) ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ, ಶಾಸಕರು, ವಿರಾಜಪೇಟೆ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಕಲ್ಪಿಸಲು ತಮ್ಮಲ್ಲಿ ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.
ಶಾಸಕರ ಮನವಿಯನ್ನು ಪರಿಗಣಿಸಿ, ರಾಜ್ಯ ಸರ್ಕಾರದಿಂದ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಅನುಕೂಲವಾಗುವಂತೆ, ರೂ.75.00 ಲಕ್ಷಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಕೂಡ ಸದರಿ ಜಾತ್ರಾ ಮಹೋತ್ಸವಕ್ಕೆ ರೂ.80 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ
BIG NEWS: ‘ಕ್ರೈಂ ಗಣೇಶ್’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More