ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯ ಕೋವಿಡ್ ಹಗರಣ ಸಂಬಂಧ ಎಸ್ಐಟಿ ತನಿಖಾ ತಂಡ ರಚನೆ ಬಗ್ಗೆ ನಿರ್ಧರಿಸಲಾಗಿತ್ತು. ಅಲ್ಲದೇ ಸಂಪುಟ ಉಪ ಸಮಿತಿಯನ್ನು ರಚಿಸುವಂತ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ.
ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು, ಅದರ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮಾನ್ಯ ಉಪ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಕೆಳಗಿನಂತೆ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಬಿಜೆಪಿ ಅವಧಿಯ ಕೋವಿಡ್ ಹಗರಣದ ಅಧ್ಯಕ್ಷರನ್ನಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರನ್ನು ನೇಮಿಸಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಶಿವಮೊಗ್ಗದ ಸಾಗರ ಜನತೆಗೆ ‘ರಾಘವೇಂದ್ರ ಡೆವಲಪರ್ಸ್ ಮಾಲೀಕ ಪ್ರದೀಪ್ ಕುಮಾರ್’ ಮಹತ್ವದ ಸ್ಪಷ್ಟನೆ
ಹಿಜ್ಬುಲ್-ಉದ್-ತಹ್ರಿರ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕೇಂದ್ರ ಘೋಷಿಸಿದೆ: ಅಮಿತ್ ಶಾ | Hizb-Ut-Tahrir
ಲೋಕಸಭೆ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಚರ್ಚೆ ಅಥವಾ ಒಪ್ಪಂದ ಆಗಿಲ್ಲ: HDK ಸ್ಪಷ್ಟನೆ
BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ