ಕಲಬುರ್ಗಿ : ಹೃದಯಾಘಾತ ಎನ್ನುವುದು ಇತ್ತೀಚಿಗೆ ಸಾಮಾನ್ಯವಾಗಿ ಬಿಟ್ಟಿದೆ. ಕೌಂಟರ್ ಬಳಿ ನಿಂತಲ್ಲೇ ಹೋಟೆಲ್ ಸಿಬ್ಬಂದಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲ್ಬುರ್ಗಿ ನಗರದ ಹೋಟೆಲ್ ಒಂದರಲ್ಲಿ ನಡೆದಿದೆ.
ಕಲಬುರಗಿಯ ಆಮಂತ್ರಣ ಹೋಟೆಲ್‌ನಲ್ಲಿ ಘಟನೆ ನಡೆದಿದ್ದು, ಮಂಗಳೂರು ಮೂಲದ 53 ವರ್ಷದ ರಾಜೇಶ್ ಮೃತ ವ್ಯಕ್ತಿ ಎನ್ನಲಾಗಿದೆ. ಕಳೆದ 15 ದಿನಗಳ ಹಿಂದಷ್ಟೇ ಈ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ. ಹೋಟೆಲ್ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತರಾಗಿದ್ದಾರೆ. ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.