ಬೆಂಗಳೂರು : ಆಯುಧ ಪೂಜೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಪೂಜೆಯ ಖರ್ಚಿ ಕೇವಲ 100 ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಕಾಂಗ್ರೆಸ್ ಸರಕಾರದ ಬಳಿ ದುಡ್ಡಿಲ್ಲ. ಸಾರಿಗೆ ಇಲಾಖೆ ದಿವಾಳಿಯಾಗಿದೆ ಎಂದು ಬಿಜೆಪಿ ಮಾಡಿದ್ದ ಟ್ವೀಟ್‌ಗೆ ಕಾಂಗ್ರೆಸ್ ಹಳೆಯ ವಿಡಿಯೋವೊಂದರ ಮೂಲಕ ತಿರುಗೇಟು ನೀಡಿದೆ. ‘ಸಿಎಂ ಅಂಕಲ್ ಅಪ್ಪನಿಗೆ ಸಂಬಳವನ್ನು ಕೊಡಿ. ಮನೆಯಲ್ಲಿ ದೀಪಾವಳಿ ಹಬ್ಬವಿಲ್ಲ,’ ಎಂದು ಅಂಗಲಾಚಿದ್ದ ಬಿಜೆಪಿ ಆಡಳಿತಾವಧಿಯ ವಿಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
ಈ ಕುರಿತು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ.
2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ ಕೊಡುತ್ತಿದ್ದ ಹಣ ₹30. ಮತ್ತೆ ಬಿಜೆಪಿಯ 2019ರಿಂದ 2023ರವರೆಗೆ ಅವಧಿಯಲ್ಲಿ ಕೊಡುತ್ತಿದ್ದ ಹಣ ₹100. ಈಗ ಮತ್ತೆ ನಮ್ಮ ಸರ್ಕಾರ 100 ರೂಪಾಯಿಯಿಂದ 250 ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ಸುಳ್ಳಿನ ಸರಮಾಲೆ ಕಟ್ಟುವ @BJP4Karnataka ಆಡಳಿತಾವಧಿಯಲ್ಲಿ ಹಬ್ಬದ ಸಂದರ್ಭದಲ್ಲೂ ಸಾರಿಗೆ ನೌಕರರಿಗೆ ವೇತನ ನೀಡದೆ ಕಣ್ಣೀರು ಹಾಕಿಸಿದ್ದನ್ನು ಜನತೆ ಮರೆತಿಲ್ಲ,ಬಸ್ಸುಗಳ ಪೂಜೆಗೆ ಹೂವು, ನಿಂಬೆಹಣ್ಣಿಗೂ ಹಣ ಕೊಡದೆ ನೌಕರರು ಸ್ವಂತ ಹಣದಿಂದ ಪೂಜೆ ಮಾಡಿದ್ದನ್ನು ರಾಜ್ಯದ ಜನ ಮರೆತಿಲ್ಲ.ಸಾರಿಗೆ ಸಂಸ್ಥೆಯ ಆಸ್ತಿಗಳನ್ನು ಅಡಮಾನ ಇಟ್ಟ ಕೀರ್ತಿ ನಿಮಗೇ ಸಲ್ಲಬೇಕು.
ಸಂಬಳ ನೀಡದೆ ನೌಕರರ ಮನೆಯ ಹಬ್ಬದ ಸಂಭ್ರಮ ಕಿತ್ತುಕೊಂಡಿದ್ದ ಬಿಜೆಪಿ ಸರ್ಕಾರಕ್ಕೆ ಮಕ್ಕಳು “ಸಿಎಂ ಅಂಕಲ್ ಸಂಬಳ ಕೊಡಿ” ಎಂದು ಅಂಗಲಾಚಿದ ಕರುಣಾಜನಕ ಸ್ಥಿತಿಯು ಇತಿಹಾಸವಾಗಿದೆ ಉಳಿದಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಬಿಜೆಪಿ ಹೇಳಿದ್ದೇನು?
ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ @INCKarnataka ಸರ್ಕಾರದ ಬಳಿ ದುಡ್ಡಿಲ್ಲ. ಪ್ರತಿ ಬಸ್ಸಿಗೆ ಕೇವಲ ₹100 ನೀಡುವಷ್ಟರ ಮಟ್ಟಿಗೆ ಸಾರಿಗೆ ಇಲಾಖೆ ದಿವಾಳಿಯಾಗಿದೆ!! ಸಚಿವ @RLR_BTM ಅವರೆ, ಸಾರಿಗೆ ಸಂಸ್ಥೆ ಹಿಂದೆಂದೂ ಕಂಡು ಕೇಳರಿಯದಂತಹ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡುವ ನಿಮಗೆ ಬಸ್ಸುಗಳ ಪೂಜಾ ಖರ್ಚಿಗೆ ಹಣ ನೀಡುವ ಯೋಗ್ಯತೆ ಇಲ್ಲವೇ..?? ಎಂದು ನಿನ್ನೆ ವಾಗ್ದಾಳಿ ನಡೆಸಿತ್ತು.
ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಭರಪೂರ ಸುಳ್ಳುಗಳು ತಯಾರಾಗುತ್ತಿವೆ,
ಆದರೆ ಆ ಸುಳ್ಳುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುವುದಿಲ್ಲ ಅಷ್ಟೇ.ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಳ್ಳಿದ ಬಿಜೆಪಿ ಈಗ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಪೋಣಿಸುತ್ತಿದೆ.
2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ… https://t.co/IVKnemNKpT pic.twitter.com/n9w368W8Gc
— Karnataka Congress (@INCKarnataka) October 10, 2024