ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂದು HD ಕುಮಾರಸ್ವಾಮಿ ನಿನ್ನೆ ಹೇಳಿದ್ದರು. ಇದರ ಮಧ್ಯ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.
ಹೌದು ಈ ಕುರಿತು HD ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ಷಣ ದವರೆಗೆ ಯಾವುದೇ ಒಪ್ಪಂದ ಆಗಿಲ್ಲ. ಯಾವುದೇ ಸಂದರ್ಭದಲ್ಲೂ ಇಂತಹ ಒಂದು ಒಪ್ಪಂದ ನಡೆದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು. ಅಲ್ಲದೆ ಮಂಡ್ಯವನ್ನು ನಾವು ಜೆಡಿಎಸ್ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ ಪ್ರಶಾಂತ್ ಗೌಡ ಆಗ್ರಹಿಸಿದರು.
ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೆ ಅಭ್ಯರ್ಥಿ. ನಾವು ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತವೆಯೊ ಅವರನ್ನು ಗೆಲ್ಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದರು. ಒಟ್ಟಿನಲ್ಲಿ ಚೆನ್ನಪಟ್ಟಣ ಉಪಚುನಾವಣೆ ಇದೀಗ ರಾಜಕೀಯವಾಗಿ ಗದಿಗೆದರಿದೆ.