ಬೆಂಗಳೂರು : ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದು, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಅನ್ಯಾಯ ಅಂತ ಹೇಳಿದ್ದೆ. ನಿನ್ನೆ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28, 152 ಕೋಟಿ ರೂಪಾಯಿ ನೀಡಿದ್ದಾರೆ.ಉತ್ತರ ಪ್ರದೇಶಕ್ಕೆ ಮಾತ್ರ 32,000 ಕೋಟಿ ಕೊಟ್ಟಿದ್ದಾರೆ. ಪದೇ ಪದೇ ಕೆಣಕುವ ಪ್ರಯತ್ನ ನಡೆಯುತ್ತಿದೆ.
ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲವಿದೆ ಆದರೆ ಅವರು ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಆಗ್ರಹಿಸಿದರು.
ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ ನಾವು ಭಾರತಾಂಬೆಯ ಮಕ್ಕಳು ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ಡಿಕೆ ಸುರೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.