ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ.
ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು ಐಎಸ್ ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ ಮೇಲೆ ಮೊಕದಮ್ಮೆ ಸಂಖ್ಯೆ 16/2014ರಲ್ಲಿ ತನಿಖೆ ಕೈಗೊಂಡಿದ್ದು, ಇವರ ವಿರುದ್ಧ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಅನುಮತಿಗಾಗಿ ರಾಜ್ಯಪಾಲರಿಗೆ ಕೋರಲಾಗಿದೆ ಎಂದಿದ್ದಾರೆ.
ರಾಜ್ಯಪಾಲರಿಗೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಅನುಮತಿ ಕೋರಿದ ನಂತ್ರ, ಈ ಬಗ್ಗೆ ದಿನಾಂಕ 28-09-2024 ಮತ್ತು 29-09-2024ರಂದು ಪತ್ರಿಕಾ ಘೋಷ್ಠಿಯನ್ನು ನೆಡೆಸಿ ನನ್ನ ಬಗ್ಗೆ ಸುಳ್ಳು ಮತ್ತು ದುರುದ್ದೇಶ ಪೂರಿತ ಆರೋಪಗಳನ್ನು ಮಾಡಿ, ಬೆದರಿಕೆಯನ್ನು ಹಾಕಿರುತ್ತಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನನ್ನನ್ನು ಕರ್ನಾಟಕ ರಾಜ್ಯ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿರುತ್ತಾರೆ. ನನ್ನ ಕುಟುಂಬದವರ ವಿರುದ್ಧವೂ ಸಹ ಸುಳ್ಳು ಆಪಾದನೆಗಳ್ನು ಮಾಡಿ ಅವರಿಗೂ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿರುತ್ತಾರೆ. ನಾನು ಬೌರಿಂಕ್ ಆಸ್ಪತ್ರೆಯಿಂದ ಸುಳ್ಳು ಮೆಡಿಕಲ್ ದಾಖಲೆಗಳನ್ನು ಪಡೆದು, ಕರ್ನಾಟಕ ಕೇಡರ್ ನಲ್ಲೇ ಮುಂದುವರೆಯುತ್ತಿರುವುದಾಗಿ ಸುಳ್ಳು ಆರೋಪ ಮಾಡಿರುತ್ತಾರೆ. ನಾನು ಲಂಚ ತೆಗೆದುಕೊಂಡಿರುವುದಾಗಿ ಸುಳ್ಳು ಆರೋಪ ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.
ದಿನಾಂಕ 29-09-2024ರಂದು ಹೆಚ್ ಡಿ ಕುಮಾರಸ್ವಾಮಿ ಅವರ ಮಗನಾದ ನಿಖಿಲ್ ಕುಮಾರಸ್ವಾಮಿ ಅವರು ಪತ್ರಿಕಾ ಘೋಷ್ಠಿಯಲ್ಲಿ ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ್ನು ಮಾಡಿರುತ್ತಾರೆ. ನಂತ್ರ ಹೆಚ್ ಡಿ ಕುಮಾರಸ್ವಾಮಿ ಅವರ ಆಪ್ತರಾದ ಸುರೇಶ್ ಬಾಬು ಅವರು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಮುಖ್ಯ ಕಾರ್ಯದರ್ಶಿಯವರಿಗೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು, ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಆರೋಪಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಈ ದೂರು ಆಧರಿಸಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ 207/2024ರಂತೆ ಎನ್ ಸಿಆರ್ ದಾಖಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ
GOOD NEWS: ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ