ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಚಾಲನೆ ನೀಡಿದರು. ಈ ಮೂಲಕ ನಾಡಿನ ಅದಿ ದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗಲು ಆರಂಭಿಸಿದೆ.
ಇದಕ್ಕೂ ಮುನ್ನಾ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜ ಪೂಜೆಯನ್ನು ನಂದಿ ಧ್ವಜಕ್ಕೆ ಪೂಜೆಯನ್ನು ಸಿಎಂ ಸಿದ್ದರಾಮಯ್ಯ ಸಲ್ಲಿಸಿದರು. ಹೀಗೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಸಿಎಂ ಸಿದ್ದರಾಮಯ್ಯಗೆ ಸಾತ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಕೆಲ ಶಾಸಕರು.
ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಕೋರಿದರು.
ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು
ದಸರಾದ ಪ್ರಮುಖ ಆಕರ್ಷಣೆ ಜಂಬೂ ಜಂಬೂಸವಾರಿ. ಈಗ ಆರಂಭಗೊಂಡಿದ್ದು, ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ಆಗಿದ್ದಾನೆ. ಸತತ 5ನೇ ಬಾರಿ ಅಂಬಾರಿಯನ್ನು ಹೊತ್ತು ಅಭಿಮನ್ಯು ಸಾಗುತ್ತಿದ್ದಾನೆ.
ಚಿನ್ನದ ಅಂಬಾರಿ ಹೊತ್ತು ನಾಡದೇವಿಯನ್ನು ಅಭಿಮನ್ಯು ಮೆರೆಸುತ್ತಿದ್ದಾನೆ. ಸತತ 5ನೇ ಬಾರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗುತ್ತಿದ್ದಾರೆ.
ಇನ್ನೂ ಕ್ಯಾಪ್ಟನ್ ಅಭಿಮನ್ಯುಗೆ ನಿಶಾನೆ ಆನೆಯಾಗಿ ಧನಂಜಯ ಆನೆ ಭಾಗಿಯಾಗಿದ್ದಾವೆ. ಗೋಪಿ ನೌಫತ್ ಆನೆಯಾಗಿ ಭಾಗಿಯಾಗಿದೆ. ಲಕ್ಷ್ಮಿ, ವರಲಕ್ಷ್ಮಿ ಆನೆ ಕುಮ್ಕಿ ಆನೆಗಳಾಗಿ ಭಾಗಿಯಾಗಿದ್ದಾವೆ. ಉಳಿದ ಆನೆಗಳು ಸಾಲಾನೆಗಳಾಗಿ ಭಾಗಿಯಾಗಿದ್ದಾವೆ. ಈ ಮೂಲಕ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು ಒಂಬತ್ತು ಆನೆಗಳು ಸಾಗುತ್ತಿರುವುದು ಕಾಣಬಹುದಾಗಿದೆ.
ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ
ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಿದರು. ಆ ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭಗೊಂಡಿದೆ.
ಮೈಸೂರು ಆರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವಂತ ಜಂಬೂಸವಾರಿಯನ್ನು ವೀಕ್ಷಿಸಲು ಬರುವಂತ ಗಣ್ಯರು, ವೀಕ್ಷಕರಿಗಾಗಿ ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭಗೊಂಡಿತ್ತು. ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಗಳು ಸವಾರಿ ತೊಟ್ಟಿಗೆ ಆಗಮನವಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಅರಮನೆಯ ಶ್ವೇತವರಾಹಸ್ವಾಮಿ ದೇವಸ್ಥಾನದಲ್ಲಿ ಜಟ್ಟಿಗಳಿಂದ ಸಿದ್ಧತೆ ನಡೆಸಲಾಗಿತ್ತು. ಬೆಳಿಗ್ಗೆ 10:45 ರಿಂದ 11 ಗಂಟೆ ಒಳಗೆ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಿತು.
ಜಟ್ಟಿಕಾಳಗ ಮುಗಿದ ಬಳಿಕ, 11:20 ರಿಂದ 11:45 ರ ವರೆಗೆ ಅರಮನೆ ಆವರಣದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ನಡೆಯಿತು. ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಿದ್ದರು. ಆ ಬಳಿಕ ಯದುವೀರ್ ಕಂಕಣ ವಿಸರ್ಜನೆ ಮಾಡಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು