ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ತುಂಗಭದ್ರಾ ನದಿ ದಂಡೆಯ ಸಮೀಪ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಕಾವೇರಿ ದೊಡ್ಡಿ ಗ್ರಾಮದ ರಮೇಶ(39) ಮತ್ತು ಪದ್ಮಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈಗಾಗಲೇ ಇವರಿಬ್ಬರೂ ಬೇರೆಬೇರೆ ಮದುವೆಯಾಗಿದ್ದರು ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದು, ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.